ಬಂಟ್ವಾಳ: ಕೊಳ್ನಾಡು ಗ್ರಾಮದ ಸುರಿಬೈಲ್- ಖಂಡಿಗ ರಸ್ತೆಯಲ್ಲಿ ಕಿರು ಸೇತುವೆಯ ತಳ ಭಾಗದಲ್ಲಿ ಅಳವಡಿಸಲಾದ ಮೋರಿಯ ಕೊಚ್ಚಿ ಹೋಗಿ ಸೇತುವೆಯು ಅಪಾಯಕಾರಿ ಸ್ಥಿತಿಗೆ ತಲುಪಿದೆ. ಸೇತುವೆಯ ಮೇಲೆ ಸಂಚಾರ ನಿಷೇಧಿಸಲಾಗಿದೆ.
ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ ಸೇತುವೆಯ ಮೇಲೆ ನಿಂತು, ನದಿ ಪಾತ್ರಗಳಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಜತೆಗೆ ನದಿ ಪಾತ್ರಗಳಲ್ಲಿ ನಿಂತು ಫೋಟೋಗ್ರಫಿ, ಸೆಲ್ಫಿ ತೆಗೆಯುವುದನ್ನೂ ನಿಷೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.