ಮಳೆಗೆ ಮನೆಯ ಗೋಡೆ ಕುಸಿತ : ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆ ಮಂದಿ

ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಸುಮಾರು 30 ವರ್ಷಗಳ ಹಿಂದಿನ ಮನೆಯಾಗಿದ್ದು, ಕುಟುಂಬಸ್ಥರು ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದರು. ಈ ಮನೆಯಲ್ಲಿ ಒಟ್ಟು 10 ಮಂದಿ ವಾಸ ಮಾಡುತ್ತಿದ್ದರು.
ಮನೆಯೊಳಗಿದ್ದ ದಾಖಲೆ ಪತ್ರ, ಮಕ್ಕಳ ಪುಸ್ತಕ, ಬಟ್ಟೆ ಬರೆ ಎಲ್ಲವೂ ಮಣ್ಣುಪಾಲಾಗಿದೆ. ಸರಕಾರ ಕೂಡಲೇ ಪರಿಹಾರ ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ.

Leave a Reply