ಪುಂಜಾಲಕಟ್ಟೆ: ಲಾರಿಪಲ್ಟಿ ಓರ್ವ ಮೃತ್ಯು – ಇನ್ನಿಬ್ನರು ಗಂಭೀರ

ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನಿಬ್ಬರು ಗಂಭೀರಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ  ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತದುರ್ದೈವಿಯಾಗಿದ್ದಾರೆ. ಗಾಯಗೊಂಡವರ ಮಾಹಿತಿ ಸಧ್ಯಕ್ಕೆ ಲಭ್ಯವಾಗಿಲ್ಲ.

ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡೊಯ್ಯುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.

ಲಾರಿಯೊಳಗೆ ಒಟ್ಟು ಎಷ್ಟು ಮಂದಿ ಇದ್ದರು ಎನ್ನುವ ಮಾಹಿತಿ ಸಧ್ಯಕ್ಕೆ ಲಭ್ಯವಾಗಿದೆ. ಗಾಯಗೊಂಡವರ ಪೈಕಿ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ಲಭಿಸಿದೆ.

ಪಲ್ಟಿಯಾದ ಲಾರಿಯ ಅಡಿಯಲ್ಲಿ ಸಿಲುಕಿದ್ದವರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ. ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೋಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

Leave a Reply