ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಕನ್ನಡದ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಕಾರ್ಯ ನಿರ್ವಾಹಕ ನಿರ್ದೇಶಕಾರಿದ್ದಂತ ಡಿ.ಕೆ ಕಿರಣ್ ಕುಮಾರ್ ಅವರನ್ನು ವಿಸ್ತಾರ ನ್ಯೂಸ್ ನಿಂದ ಅಮಾನತುಗೊಳಿಸಲಾಗಿದೆ.
ಈ ಕುರಿತಂತೆ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿಸ್ತಾರ ನ್ಯೂಸ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದಂತ ಕಿರಣ್ ಕುಮಾರ್ ಡಿ.ಕೆ ಅವರನ್ನು ದಿನಾಂಕ 19-07-2024ರ ಇಂದಿನಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಅಂತ ತಿಳಿಸಿದೆ.
ಇನ್ಮುಂದೆ ಕಿರಣ್ ಕುಮಾರ್ ಡಿ.ಕೆ ಅವರೊಂದಿಗೆ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಗೂ ಯಾವುದೇ ಸಂಬಂಧ, ಯಾವುದೇ ವ್ಯವಹಾರ ಮಾಡುವಂತಿಲ್ಲ. ಇದರೊಂದಿಗೆ ನಮ್ಮ ಸಂಸ್ಥೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಯಾರಾದರೂ ಆ ರೀತಿ ಮಾಡಿದರೇ ಅದಕ್ಕೆ ಅವರೇ ಹೊಣೆಗಾರರು ಎಂಬುದಾಗಿ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.