Visitors have accessed this post 287 times.

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಮಾರ್ಗ ದಿನದ 24 ಗಂಟೆ ವಾಹನ ಸಂಚಾರ ಪುನಾರಂಭ

Visitors have accessed this post 287 times.

ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಸಮೀಪದ ಶಿರಾಡಿ ಮಾರ್ಗ ನಡುವೆ ಭೂ ಕುಸಿತ ಸಂಭವಿಸಿದ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ದಿನದ 24 ಗಂಟೆ ವಾಹನಗಳ ಸಂಚಾರಕ್ಕೆ ಅವಕಾಶ ಆರಂಭಿಸಲಾಗಿದೆ. ಶನಿವಾರ ರಾತ್ರಿಯೇ ಕೆಲವು ವಾಹನಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಅವಕಾಶ ಒದಗಿಸಲಾಗಿದ್ದು, ರವಿವಾರ ರಾತ್ರಿಯಿಂದ ಪೂರ್ಣ ಪ್ರಮಾಣದಲ್ಲಿ ಅವಕಾಶ ಒದಗಿಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಉನ್ನತ ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಈ ಕುರಿತು ಹಾಸನ ಜಿಲ್ಲಾಧಿಕಾರಿಯಿಂದ ರವಿವಾರ ಸಂಜೆಯ ತನಕ ಅಧಿಕೃತ ಆದೇಶ ಹೊರಬಿದ್ದಿಲ್ಲ. ಭೂ ಕುಸಿತ ಸಂಭವಿಸಿದ ಬಳಿಕ ಈ ಮಾರ್ಗ ಶಿರಾಡಿ ಘಾಟಿ ಪ್ರದೇಶದಲ್ಲಿ ಬೆಳಗ್ಗೆ 6ರಿಂದ ರಾತ್ರಿ 6 ತನಕ ಮಾತ್ರ ವಾಹನಗಳ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ಮಂಗಳೂರು ನಿಲ್ದಾಣದಿಂದ ಹೊರಟ ಬಸ್‌ಗಳು ಗುಂಡ್ಯ ಭಾಗದಲ್ಲಿ ಹಾಗೂ ಬೆಂಗಳೂರಿನಿಂದ ರಾತ್ರಿ ಹೊರಟ ಬಸ್ ಸಕಲೇಶಪುರದಲ್ಲಿ ಸುಮಾರು 2:30 ಗಂಟೆ ಕಾಯುವ ಪರಿಸ್ಥಿತಿ ಇತ್ತು. ಈ ಸಮಸ್ಯೆ ಸದ್ಯ ನಿವಾರಣೆಯಾಗಿದೆ.

Leave a Reply

Your email address will not be published. Required fields are marked *