October 24, 2025
WhatsApp Image 2024-06-14 at 10.13.03 AM


ಮಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ವ್ಯಕ್ತಿಗೆ 10 ಲಕ್ಷ ರೂ. ವಂಚಿಸಿದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು 2023ರ ನವೆಂಬರ್‌ನಲ್ಲಿ ಓಶಿಯನ್‌ ಫೈನಾನ್ಸ್ ಅಕಾಡಮಿ ಎಂಬ ಕಂಪೆನಿಯ ವೆಬ್‌ಸೈಟ್‌ನಲ್ಲಿ ಕ್ರಿಫ್ಟ್ – ಕರೆನ್ಸಿಯ ಬಗ್ಗೆ ಆನ್‌ಲೈನ್‌ನಲ್ಲಿ ತರಬೇತಿ ಪಡೆದಿದ್ದೆ. ಆಗ ಕಂಪೆನಿಯವರು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಪಡೆದುಕೊಂಡು ಕ್ರಿಪ್ಟೋ ಕರೆನ್ಸಿಯ ವೆಬ್ ಸೈಟ್ ಪರಿಚಯಿಸಿದರು. ಅನಂತರ ಅಡ್ಮಿನ್ ಕಾದಿರ್ ಎಂದು ಪರಿಚಯಿಸಿಕೊಂಡ ವ್ಯಕ್ತಿ ಆನ್‌ಲೈನ್ ಮೂಲಕ ಸಂದೇಶ ಕಳುಹಿಸಿ ಹಣ ಹೂಡುವಂತೆ ತಿಳಿಸಿದ್ದ. ಅದರಂತೆ ತಾನು 12,500 ರೂ. ಹೂಡಿಕೆ ಮಾಡಿದ್ದೆ. ಅದರ ಲಾಭಾಂಶವೆಂದು 46,000 ರೂ. ಗಳನ್ನು ತನ್ನ ಖಾತೆಗೆ ಕಳುಹಿಸಲಾಗಿತ್ತು. ಅನಂತರ ಆರೋಪಿಗಳು 2024ರ ಮೇ ತಿಂಗಳಲ್ಲಿ ಮೆಸೇಜ್ ಮಾಡಿ ಕ್ರಿಷ್ಟೋ ಕರೆನ್ಸಿಯಲ್ಲಿ ಒಳ್ಳೆಯ ಲಾಭವಿದೆ ಎಂದು ನಂಬಿಸಿ ಕಾಯಿನ್ ಖರೀದಿಸುವಂತೆ ತಿಳಿಸಿದರು.ಮೇ 13ರಂದು ಎರಡು ಕಾಯಿನ್‌ ಗಳಿಗೆ ತಲಾ 5 ಲಕ್ಷ ರೂ. ಗಳಂತೆ ಒಟ್ಟು 10 ಲಕ್ಷ ರೂ. ಗಳನ್ನು ವರ್ಗಾಯಿಸಿಕೊಂಡಿದ್ದರು. ಅನಂತರ ಯಾವುದೇ ಹಣ ವಾಪಸ್ ನೀಡದೆ ವಂಚಿಸಿದ್ದಾರೆ. ಎಂದು ದೂರಿನಲ್ಲಿ ತಿಳಿಸಲಾಗಿದೆ.

About The Author

Leave a Reply