February 22, 2026
WhatsApp Image 2024-07-26 at 9.58.19 AM

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃತಪಟ್ಟವರು.

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

About The Author

Leave a Reply