
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮುಂದಿನ ಐದು ದಿನಗಳಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ನಿವೃತ್ತಿಯಾಗಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.