
ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.



ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.