ಬೆಳ್ತಂಗಡಿ: ಪೆರಾಡಿ ಕನ್ಯಾನ ಮನೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದ SDPI ನಿಯೋಗ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಎಂಬವರ ವಾಸದ ಮನೆ ಕುಸಿದ ಪ್ರದೇಶಕ್ಕೆ SDPI ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ನಿಯೋಗ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊ‌ಂಡರು.

ಮನೆ ಕುಸಿತದಿಂದ ಅಲ್ಪದರಲ್ಲಿ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡಿರುವ ಕುಟುಂಬಕ್ಕೆ ತಾಲೂಕು ತಹಸೀಲ್ದಾರ್ ಅಧಿಕಾರಿಗಳು ಭೇಟಿ ನೀಡಿ ಶೀಘ್ರದಲ್ಲಿ ಸರಕಾರದಿಂದ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಈ ಕುಟುಂಬಕ್ಕೆ ಸಹಾಯವನ್ನು ಮಾಡಬೇಕಾಗಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮುಖಂಡರುಗಳಾದ ಶಮೀಮ್ ಯೂಸುಫ್, ಅಳದಂಗಡಿ ಬ್ಲಾಕ್ ಕಾರ್ಯದರ್ಶಿ ಜುನೈದ್ ಪಡ್ಡಂದಡ್ಕ, ಪೆರಾಡಿ ಬ್ರಾಂಚ್ ಅಧ್ಯಕ್ಷರಾದ ಶರೀಫ್, ಕಾರ್ಯದರ್ಶಿ ಹಮೀದ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply