
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸದ್ಯಕ್ಕೆ ಏನೂ ತೊಂದರೆ ಕಾಣುತ್ತಿಲ್ಲ ಎಂದು ಅವರು ತಿಳಿಸಿದರು.



ಇಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಿಯವರೆಗೆ ಮತಗಳನ್ನು ಮಾರಾಟ ಮಾಡುತ್ತಾರೋ ಅಲ್ಲಿಯವರೆಗೆ ಲಾಭ – ನಷ್ಟ ಇರುತ್ತದೆ.
ಹಿಂದಿನ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ. ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕುತ್ತಾನೋ. ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ ಎಂದು ಹೇಳಿದರು.
ಇದು ಕ್ರೋಧಿನಾಮ ಸಂವತ್ಸರ. ಕ್ರೋಧ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ. ಪ್ರಾಕೃತಿಕ ದೋಷ ಮುಂದುವರೆಯುತ್ತದೆ. ಅಮವಾಸ್ಯೆವರೆಗೆ ಒಂದು ಭಾಗಕ್ಕೆ ನಿಲ್ಲುತ್ತದೆ. ನಂತರ ಮತ್ತೊಂದು ಭಾಗಕ್ಕೆ ಹೋಗುತ್ತದೆ. ಮುಂದೆ ಅನಿಷ್ಠ ಜಾಸ್ತಿ ಇದೆ. ಕತ್ತಲು ಬೆಳಕು ಎರಡು ಇರುತ್ತದೆ. ಅದರಲ್ಲಿ ಕತ್ತಲು ಜಾಸ್ತಿ ಇರುತ್ತದೆ ಎಂದು ನುಡಿದರು.
ಬರುವ ದಿನಗಳಲ್ಲಿ ರೋಗರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತವೆ. ಅಲ್ಪಾಯಸ್ಸು ಕಡಿಮೆ ಆಗುತ್ತೆ. ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದ್ದಾವೆ ಆದರೆ, ಬೆಳಕನ್ನು ಕಪ್ಪು ಓರೆ ಮಾಡಿದಾಗ ಕಪ್ಪೇ ಜಾಸ್ತಿ ಎಂದು ಎಚ್ಚರಿಸಿದರು.