Visitors have accessed this post 694 times.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹೆಚ್ಡಿಕೆ ಬಿಜೆಪಿ ಹೈಕಮಾಂಡ್ಗೆ ಷರತ್ತು ಹಾಕಿದ್ದು ಷರತ್ತಿಗೆ ಒಪ್ಪಿದರೆ ಪಾದಯಾತ್ರೆಗೆ ಬರುವೆ ಎಂದು ಖಡಕ್ ಆಗಿ ಸಂದೇಶ ರವಾನಿಸಿದ್ದಾರೆ.
ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬೆಂಗಳೂರಿಂದ ಮೈಸೂರಿಗೆ ಆಗಸ್ಟ್ 3 ರಂದು ಪಾದಯಾತ್ರೆ ನಡೆಸಲು ತೀರ್ಮಾನಿಸಿತ್ತು. ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಜೆಪಿ ಜೆಡಿಎಸ್ ಜಂಟಿ ಸಭೆ ಕೂಡ ನಡೆಸಿದ್ದರು.
ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೆಂಡಕಾರಿದ್ದು ಪಾದಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಖಡಕ್ ಆಗಿ ನಿರ್ಧಾರ ತಿಳಿಸಿದ್ದರು.
ಸದ್ಯ ಮೈತ್ರಿ ಪಕ್ಷದಲ್ಲಿ ಗೊಂದಲ ವ್ಯಕ್ತವಾದ ಹಿನ್ನೆಲೆ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಹೆಚ್ಡಿ ಕುಮಾರಸ್ವಾಮಿ ಅವರ ಮನವೊಲಿಸಲು ಪ್ರಯತ್ನಿಸಿದ್ದು ಈ ವೇಳೆ ಹೆಚ್ಡಿಕೆ ಒಂದು ಷರತ್ತು ಇಟ್ಟಿದ್ದಾರೆ. ಪ್ರೀತಂಗೌಡ ಪಾದಯಾತ್ರೆಯಲ್ಲಿ ಇರಬಾರದು. ಹಾಗಿದ್ದಾಗ ಮಾತ್ರ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗುತ್ತೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್ಡಿಕೆ ಷರತ್ತು ಹಾಕಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.