October 21, 2025
WhatsApp Image 2024-08-02 at 3.01.23 PM

ಮಂಗಳೂರು: ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದಿಂದ ಸಂತ್ರಸ್ತರಾಗುತ್ತಿರುವ ಬಗ್ಗೆ ಸ್ಥಳೀಯರು ಸಚಿವರ ಗಮನ ಸೆಳೆದರು. ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆಯೂ ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ದಿನೇಶ್ ಗುಂಡೂರಾವ್ ಅಲ್ಲಿನ ಸ್ಥಿತಿ ನೋಡಿ ಶಾಕ್ ಆದರು. ಈ ವೇಳೆ ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಸ್ಥಿತ ನೋಡಿದರೆ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು. ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇನೆ ಎಂದರು…

About The Author

Leave a Reply