Visitors have accessed this post 481 times.
ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ. ಜೊತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ. ಈ ವೇಳೆ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿ ಪ್ರಥಮ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.