Visitors have accessed this post 1637 times.
ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ. ನಾಳೆ,ಅಥವಾ ನಾಡಿದ್ದು ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ 2,000 ರೂ.ಖಾತೆಗೆ ಜಮಾ ಆಗಲಿದೆ.
ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಗೆ ಸೋಮವಾರದಿಂದ ಪ್ರಕ್ರಿಯೆ ಶುರುವಾಗಿದ್ದು, ಬುಧವಾರದೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ನಾಳೆ ಅಥವಾ ನಾಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎನ್ನಲಾಗಿದೆ.
ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ.