Visitors have accessed this post 606 times.
ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ, ಅವಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, 4 ಲಕ್ಷ ರೂಪಾಯಿ ಪಡೆದುಕೊಂಡು ವಂಚನೆ ಮಾಡಿದ ಹಿನ್ನೆಲೆಯಲ್ಲಿ ಇದೀಗ ಶಿವಮೊಗ್ಗದ ಜಿಲ್ಲಾ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಮೋಸ ಜೊತೆಗೆ ಸಂತ್ರಸ್ತೆಯಿಂದ 4 ಲಕ್ಷ ರೂ. ಹಣ ಪಡೆದು ಹಿಂದಿರುಗಿಸದೆ ವಂಚಿಸಿರುವ ಆರೋಪದ ಮೇಲೆ ಬಂಧನವಾಗಿದೆ.
ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ.ಏಳೆಂಟು ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್, ಸಂತ್ರಸ್ತ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದ್ದಾಳೆ.
ನನಗೆ ಹಣಕಾಸಿನ ಸಮಸ್ಯೆ ಇದೆ. ಅದು ಬಗೆಹರಿದ ನಂತರ ಮದುವೆಯಾಗುತ್ತೇನೆ ಎಂದು ಶರತ್ ಭರವಸೆ ನೀಡಿದ್ದ. ಅಲ್ಲದೆ, ಈಗ ನನಗೆ ಸಹಾಯ ಮಾಡು ಎಂದು ಕೇಳಿದ್ದ. ಈ ವೇಳೆ ಮಹಿಳೆಯು ಹಲವು ಬಾರಿ ಹಣ ನೀಡಿದ್ದು, ಒಟ್ಟು ನಾಲ್ಕು ಲಕ್ಷ ಹಣ ನಾಲ್ಕು ಲಕ್ಷ ಹಣವನ್ನು ಶರತ್‌ಗೆ ನೀಡಿದ್ದರು. ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗುವುದನ್ನು ನಿಲ್ಲಿಸಿದ್ದಲ್ಲದೆ, ಫೋನ್ ಸಂಪರ್ಕವನ್ನೂ ಕಡಿದುಕೊಂಡಿದ್ದ ಎಂದು ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿರುವ 43 ವರ್ಷದ ವಿಚ್ಛೇದಿತ ಮಹಿಳೆ ದೂರು ನೀಡಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಒಂದು ವಾರದಿಂದ ತಲೆಮರಿಸಿಕೊಂಡಿದ್ದ ಆರೋಪಿ ಬಿಜಾಪುರದಲ್ಲಿ ಪೊಲೀಸ್ ಬಲೆಗೆ ಬಿದ್ದಾನೆ. ಸದ್ಯ ಶರತ್ನನ್ನು ವಿಜಯಪುರದಿಂದ ಶಿವಮೊಗ್ಗಕ್ಕೆ ಕರೆತಂದು ವಿಚಾರಣೆಗೊಳಪಡಿಸಿದ್ದಾರೆ.