Visitors have accessed this post 265 times.
ಮನೆ ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ -ಲಿಂಕ್ ಮಾಡುವ ಸೌಲಭ್ಯವನ್ನು ಇಂಧನ ಇಲಾಖೆ ವತಿಯಿಂದ ಕಲ್ಪಿಸಲಾಗಿದೆ.
ಫಲಾನುಭವಿಗಳು ವಿವಿಧ ಕಾರಣಗಳಿಂದ ಮನೆ ಬದಲಾವಣೆ ಸಂದರ್ಭದಲ್ಲಿ ಹಳೆ ಖಾತೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ ನಲ್ಲಿ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.