ನವಿಲು ಸಾಂಬರ್ ಮಾಡಿದ ಯೂಟ್ಯೂಬರ್ ಅರೆಸ್ಟ್..!

ತೆಲಂಗಾಣ : ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಪ್ರಣಯ್ ಯೂಟ್ಯೂಬರ್ ಈ ವಿಡಿಯೋ ವೈರಲ್ ಆಗಿದ್ದುಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋದ ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೆ ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ವಶಕ್ಕೆ ಪಡೆದಿರುವುದನ್ನು ಅಧಿಕಾರಿಗಳು ಲ್ಯಾಬ್‌ಗೆ ಕಳುಹಿಸಿದ್ದಾರೆ. ಒಂದು ವೇಳೆ ಅದು ನವಿಲು ಖಾದ್ಯ ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply