ಮಂಗಳೂರು: ಅರ್ಕುಳ ವಳಚ್ಚಿಲ್ ಜುಮಾ ಮಸೀದಿ ಹಾಗೂ SKSSF ವಳಚ್ಚಿಲ್ ಕ್ಲಸ್ಟರ್ ವತಿಯಿಂದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯ ಸಹಯೋಗದಲ್ಲಿ ವಳಚ್ಚಿಲ್ ದರ್ಗಾ ಸಭಾಂಗಣದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಶಿಬಿರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು.
ಮಂಗಳೂರು ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಶಿವಕುಮಾರ್ ಕೆ.ಆರ್. ರಕ್ತದಾನದ ಮಹತ್ವ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಇನಾಯತ್ ಅಲಿ ಸ್ವತಃ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ.