October 13, 2025
WhatsApp Image 2024-08-13 at 3.04.00 PM

ಪುತ್ತೂರು:  ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ತಡ ರಾತ್ರಿ ಇನೋವಾ ಕಾರಿನಲ್ಲಿ ಬಂದ ತಂಡವೊಂದಕ್ಕೆ ರೂಂ ನೀಡಿರುವುದೆ ದಾಳಿಗೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಇನೋವಾದಲ್ಲಿ ಬಂದ ವ್ಯಕ್ತಿಗಳ ಬಳಿ ಸರಿಯಾದ ದಾಖಲಾತಿ ಪಡೆದುಕೊಳ್ಳದೆ ರೂಂ ನೀಡಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡುತ್ತಿದ್ದಾರೆ. ಆ ಇನ್ನೊವಾದಲ್ಲಿ ಅನ್ಯಕೋಮಿನ ಜೋಡಿ ಇತ್ತು ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಪುತ್ತೂರಿನ ಹೊರವಲಯ ನೆಹರೂ ನಗರದಲ್ಲಿರುವ ಲಾಡ್ಜ್ ವೊಂದಕ್ಕೆ ಮಂಗಳವಾರ ಮಧ್ಯಾಹ್ನ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಪುತ್ತೂರಿನ ನೆಹರೂ ನಗರದಲ್ಲಿರುವ ಕೀರ್ತನ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಪೋಲೀಸರು ರೇಡ್ ಮಾಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪುತ್ತೂರು ನಗರ ಠಾಣೆ ಎಎಸ್‌ಐ ಅಂಜನೇಯ ರೆಡ್ಡಿ ನೇತ್ರತ್ವದಲ್ಲಿ ಸಿಬ್ಬಂದಿಗಳ ತಂಡ ಲಾಡ್ಜ್‌ಗೆ ತೆರಳಿ ತನಿಖೆ ನಡೆಸಿದ್ದಾರೆ. ಈ ವೇಳೆ ಅವರು ರೂಂ ನೀಡುವಾಗ ಪಡೆದುಕೊಳ್ಳುವ ದಾಖಲಾತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ತನಿಖೆಯ ವೇಳೆ ಲಾಡ್ ನವರು ಯಾವುದೇ ಅಕ್ರಮ ನಡೆಸಿದ್ದು ಕಂಡು ಬಂದಿಲ್ಲ ಹೀಗಾಗಿ ಪೊಲೀಸರು ವಿಚಾರಣೆ ನಡೆಸಿ ವಾಪಸ್ಸು ಬಂದಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

About The Author

Leave a Reply