
ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.



ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಭುವನೇಶ್ವರಿ, ಮೋಹನ್ ಹಾಗೂ ದರ್ಶನ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಇಂದು ಮನೆಯ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.