Visitors have accessed this post 592 times.
ಉಳ್ಳಾಲ : ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು ಗುರುತಿಸಲಾಗಿದೆ. ಮಜೀದ್ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಚಾಲಕನಿಲ್ಲದ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ.
ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನು ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರು ಎಂದು ತಿಳಿದು ಬಂದಿದೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು, ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ಪತ್ನಿ,ಒಂದು ಗಂಡು,ಮತ್ತೊಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.