
ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.



ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.
ಹಲವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಇಡೀ ದೇಶವೇ ಮಹಾಪುರುಷರಿಗೆ ಋಣಿಯಾಗಿದೆ ಎಂದು ಹೇಳಿದ್ದಾರೆ.
ನೈಸರ್ಗಿಕ ವಿಪತ್ತುಗಳು ಕಳೆದ ಕೆಲವು ವರ್ಷಗಳಿಂದ ನಮ್ಮ ಕಳವಳವನ್ನು ಹೆಚ್ಚಿಸಿವೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. 2047 ರಲ್ಲಿ ವಿಕಸಿತ ಭಾರತದ ಕನಸು ನನಸಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಈ ವರ್ಷ ಮತ್ತು ಕಳೆದ ಕೆಲವು ವರ್ಷಗಳಿಂದ, ನೈಸರ್ಗಿಕ ವಿಕೋಪದಿಂದಾಗಿ, ನಮ್ಮ ಕಳವಳಗಳು ಹೆಚ್ಚುತ್ತಿವೆ. ಪ್ರಕೃತಿ ವಿಕೋಪದಲ್ಲಿ ಹಲವಾರು ಜನರು ತಮ್ಮ ಕುಟುಂಬ ಸದಸ್ಯರು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ; ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ ಎಂದರು.