ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಐದೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ.
ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ , ಈವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹೊಸ ಯೋಜನೆ ಜಾರಿಗೆ ತರುತ್ತೇವೆ. ಬ್ರಾಂಡ್ ಬೆಂಗಳೂರು ಮೂಲಕ ನಗರವನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2,000 ರೂ. ನಂತರ ಪ್ರತಿ ರೈತರಿಗೆ ಮಧ್ಯಂತರ ಬರಪರಿಹಾರ ನೀಡಿದ್ದೇವೆ. ನಮ್ಮ ಸರ್ಕಾರ ಕೇವಲ 5 ಗ್ಯಾರಂಟಿಗಳಿಷ್ಟೇ ಸೀಮಿತವಾಗಿಲ್ಲ. ಮೈತ್ರಿ ಯೋಜನೆಯಡಿ ಪಿಂಚಣಿ ಮೊತ್ತ ಹೆಚ್ಚಳ, ಹಾಲಿನ ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.