October 26, 2025
WhatsApp Image 2024-08-15 at 1.20.30 PM

ಮಂಗಳೂರು: 86 ಸಿಮ್‌ಕಾರ್ಡ್‌ ಸಹಿತ ಇಬ್ಬರು ಆರೋಪಿಗಳ ಬಂಧನ: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ ವಿದ್ಯಾರ್ಥಿ ಶಹಾದ್ ಮೊಹಮ್ಮದ್ ಸಮೀರ್‌ (21), ಮೊಹಮ್ಮದ್ ಅಜೀಮ್‌ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 86 ಸಿಮ್ ಕಾರ್ಡ್‌ಗಳು ಸಹಿತ ₹ 5.49 ಲಕ್ಷ ಮೌಲ್ಯದ ಸ್ವತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮರೋಳಿ ಗ್ರಾಮದ ಬಿಕರ್ನಕಟ್ಟೆ ಬಜ್ಜೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಯುವಕರು ಭಾರಿ ಸಂಖ್ಯೆಯಲ್ಲಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿ, ವಿದೇಶದಲ್ಲಿರುವವರಿಗೆ ಅಕ್ರಮವಾಗಿ ಮಾರಾಟ ಮಾಡಲು ಸಂಚು ರೂಪಿಸಿದ ಬಗ್ಗೆ ಸೆನ್‌ ಠಾಣೆಯ ಪಿಎಸ್‌ಐ ಗುರಪ್ಪ ಕಂಟಿ ಅವರಿಗೆ ಮಾಹಿತಿ ಬಂದಿತ್ತು.

 

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು, ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್ ಸೂಚನೆಯಂತೆ ವಿದೇಶಕ್ಕೆ ಮಾರಾಟ ಮಾಡಲು ಗೆಳೆಯರನ್ನು ಪುಸಲಾಯಿಸಿ ಸಿಮ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದರು. ಆರೋಪಿ ಸಮೀರ್‌ನಿಂದ 86 ಸಿಮ್‌ ಕಾರ್ಡ್‌, ಎರಡು ಮೊಬೈಲ್ ಫೋನ್‌, ಸಾಗಾಟಕ್ಕೆ ಬಳಸಿದ ಮಾರುತಿ ಸ್ವಿಫ್ಟ್‌ ಕಾರನ್ನು ಹಾಗೂ ಇನ್ನೊಬ್ಬ ಆರೋಪಿ ಅಜೀಮ್‌ನಿಂದ ಒಂದು ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

About The Author

Leave a Reply