Visitors have accessed this post 360 times.

‘ಭೂಕುಸಿತ’ : ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ

Visitors have accessed this post 360 times.

ಅತಿಯಾದ ಮಳೆ ಬೀಳುತ್ತಿರುವುದರಿಂದ ಹಾಸನ ಜಿಲ್ಲೆಯ ಸಕಲೇಶಪುರದ ಆಚಾಂಗಿ ದೊಡ್ಡ ನಾಗರ ರೇಲ್ವೆ ಹಳಿಯ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ.ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ಸಂಚಾರ ಸ್ಥಗಿತವಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು.

ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಬಳಿಕ ಇದೀಗ ಮತ್ತೆ ಮಣ್ಣು ಕುಸಿತವಾಗಿದೆ.

ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಈ ಮುಂಚೆ ಭೂ ಕುಸಿತವಾದಾಗ ಒಟ್ಟು 6 ಕಡೆ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ, ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರ್ಡೇಶ್ವರ, ಆಲೂರು-ಹಾಸನ, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಒಟ್ಟು 6 ಕಡೆಗಳಲ್ಲಿನ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು.

Leave a Reply

Your email address will not be published. Required fields are marked *