Visitors have accessed this post 396 times.
ಉಪ್ಪಿನಂಗಡಿ : ಖಾಸಗಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟ ಹಾಗೂ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿದ್ದ ಲಾರಿ ನಡುವೆ ಪೆರ್ನೆ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.