November 28, 2025
WhatsApp Image 2024-08-17 at 11.11.37 AM

ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋಮುದ್ವೇಷ ಬಿತ್ತುವ ಭಾಷಣ ಮಾಡಿ ದೂರು ದಾಖಲಿಸಿಕೊಂಡಿದ್ದ ಬಿಜೆಪಿ ಶಾಸಕ ಹರೀಶ್​ ಪೂಂಜಾಗೆ (Harish Poonja) ಇದೀಗ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಗ್ರಾಮಸ್ಥರು ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಅಡಚಣೆ ಉಂಟಾಗಿತ್ತು. ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಸ್ಥಳೀಯ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ ತಡವಾಗಿ ಭೇಟಿ ನೀಡಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಈ ವೇಳೆ ಕ್ಷೇತ್ರದ ಜನರ ಜೊತೆಗೂ ಶಾಸಕ ಹರೀಶ್​ ಪೂಂಜಾ ಕಿರಿಕ್​ ಮಾಡಿಕೊಂಡಿದ್ದಾರೆ.

‘MLAಗೆ ಏಕೆ ತಡವಾಗಿ ಬಂದೆ ಎಂದು ಪ್ರಶ್ನೆ ಮಾಡುವ ಹಕ್ಕು ನಿಮಗಿಲ್ಲ’ ಆ ರೀತಿ ಪ್ರಶ್ನೆ ಮಾಡಿದ್ರೆ ದೇವರ ಮೇಲೆ ಇಡುತ್ತೇನೆ ಎಂದು ಪ್ರಶ್ನೆ ಮಾಡಿದ ಜನರಿಗೆ ದೇವರ ಹೆಸರಲ್ಲಿ ಹರೀಶ್ ಪೂಂಜಾ ಬ್ಲ್ಯಾಕ್​​ಮೇಲ್ ಮಾಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವರ್ತನೆಗೆ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.

ತೀವ್ರ ಮಳೆ ಹಾನಿ ಆದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಅನುಪಸ್ಥಿತರಿದ್ದರು. ಆದರೆ ಈಗ ಮಳೆ ಕಡಿಮೆಯಾದ ಬಳಿಕ ಸವಾಣಾಲು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ ತಡವಾಗಿ ಬಂದಿದ್ದಕ್ಕೆ ಶಾಸಕ ಹರೀಶ್ ಪೂಂಜಾಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದರು. ಶಾಸಕನನ್ನಿ ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ನಾಯಿ ಎಂದು ಅವಾಚ್ಯವಾಗಿ ಶಾಸಕ ಪೂಂಜಾ ನಿಂದಿಸಿದ್ದಾರೆ. ಈ ವೇಳೆ ಗ್ರಾಮಸ್ಥರು, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಆಕ್ರೋಶ ತೀವ್ರಗೊಳ್ತಿದ್ದಂತೆ ಶಾಸಕ ಪೂಂಜಾ ಸ್ಥಳದಿಂದ ತೆರಳಿದರು.

ಇನ್ನು ಮತ್ತೊಂದೆಡೆ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಶಾಸಕ ಹರೀಶ್ ಪೂಂಜಾ, ಚರಕದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿಲ್ಲ ಎನ್ನುವ ಮೂಲಕ ಮಹಾತ್ಮ ಗಾಂಧಿಯವರನ್ನು ಮತ್ತು ಅವರ ಹೋರಾಟವನ್ನು ಟೀಕೆ ಮಾಡಿದ್ದರು. ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ಯ್ರ ಬಂದಿಲ್ಲ ಎಂದಿದ್ದರು. ಸದ್ಯ ಈ ಹೇಳಿಕೆ ಸಂಬಂಧ ಶಾಸಕನ ವಿರುದ್ಧ ಕೇಸ್ ದಾಖಲಾಗಿದೆ.

ಇನ್ನು ಇದಕ್ಕೂ ಮುಂಚೆ ಶಾಸಕ ಹರೀಶ್ ಪೂಂಜಾ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ್ದರು. ಇವರ ವರ್ತನೆ ಒಂದೆರೆಡಲ್ಲ.

About The Author

Leave a Reply