October 24, 2025
WhatsApp Image 2024-08-18 at 1.15.39 PM

 ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

 

ಮೈಸೂರು ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆಯ ತಗಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಯಾದಗಿರಿ, ಬೆಂಗಳುರು ಸೇರಿದಂತೆ ರಾಜ್ಯದ ಹಲವಡೆ ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.

About The Author

Leave a Reply