Visitors have accessed this post 262 times.
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದು, ಇಂದು ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.