November 28, 2025
WhatsApp Image 2024-08-19 at 12.10.27 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ.

 

ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು.

ಈ ವೇಳೆ ತುಷಾರ್ ಮೆಹ್ತಾ ಅವರು ನಾಳೆ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದಾಗ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಿದ ಮಾತ್ರಕ್ಕೆ ಅವರ ವಾದ ಕೇಳಬೇಕಿಲ್ಲ ಎಂದು ಸಿಎಂ ಪರ ಅಭಿಷೇಕ್ ಮನುಸಿಂಗ್ವಿ ವಾದಿಸಿದರು.

ರಾಜಪಾಲರ ಶೋಕಾಸ್ ನೋಟಿಸ್ ಗೆ ಉತ್ತರ ನೀಡಲಾಗಿತ್ತು. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ದೂರುಗಳು ಉದ್ದೇಶಪೂರಿತ. ಶೋಕಾಸ್ ನೋಟಿಸ್ ಗೆ ಕ್ಯಾಬಿನೆಟ್ ಸಲಹೆ ಕೂಡ ಕೊಟ್ಟಿದೆ ಕ್ಯಾಬಿನೆಟ್ ಸಲಹೆ ಪರಿಗಣಿಸದೆ, ರಾಜ್ಯಪಾಲರು 100 ಪುಟಗಳ ಕ್ಯಾಬಿನೆಟ್ ಸಲಹೆಗೆ ಎರಡು ಪುಟಗಳ ಉತ್ತರ ಕೊಟ್ಟಿದ್ದಾರೆ ಎಂದು ಅಭಿಷೇಕ್ ಮನುಸಿಂಗ್ವಿ ವಾದಿಸಿದರು.

ಸರ್ಕಾರವನ್ನು ಅಸ್ಥಿರಗೊಳಿಸಲು ಇಂತಹ ಕ್ರಮವಾಗುತ್ತಿದೆ. ರಾಜೀನಾಮೆ ಪಡೆಯಲು ಈಗ ರಾಷ್ಟ್ರಪತಿ ಆಳ್ವಿಕೆ ಅಗತ್ಯವಿಲ್ಲ. ಕೇವಲ ಇಂತಹ ದೂರುಗಳ ಮೂಲಕ ಉದ್ದೇಶ ಈಡೇರುತ್ತಿದೆ. ಸರ್ಕಾರಿ ಸೇವಕನಾಗಿ ಸಿಎಂ ಯಾವುದೇ ಶಿಫಾರಸ್ಸು ಮಾಡಿಲ್ಲ. ಮೋಡ ಫೈಲ್ ಸಂಬಂಧ ಯಾವುದೇ ನಿರ್ಧಾರ ಸಿಎಂ ಮಾಡಿಲ್ಲ ಎಂದು ವಾದಿಸಿದರು.

ಹೊಸ ಬಿಎನ್‌ಎಸ್ ಕಾಯಿದೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ತಮ್ಮ ಕರ್ತವ್ಯದ ಭಾಗವಾಗಿ ಸಿಎಂ ನಿರ್ಧಾರ ಕೈಗೊಂಡಿಲ್ಲ. ಆದರು ವಿವೇಚನಾ ರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶ ನೀಡುವ ಹಾಗಿಲ್ಲ. ಇದಕ್ಕೆ ವಿವರಣೆಯಾಗಿ ಮಧ್ಯಪ್ರದೇಶದ ತೀರ್ಪನ್ನು ಕೂಡ ಮನುಸಿಂಗ್ವಿ ಉಲ್ಲೇಖಿಸಿದರು.

About The Author

Leave a Reply