ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಬಂಧಿತರು.
ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ಮಾಡುತಿದ್ದ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆ ಮುಂಭಾಗದ ಟ್ರಾಫಿಕ್ ಸಿಗ್ನಲ್ ನಲ್ಲಿ ಬಸ್ಸೊಂದು ಸಾರ್ವಜನಿಕರನ್ನು ಕರೆದುಕೊಂಡು ಹೋಗುವಾಗ ಯಾರೋ 10-15 ಜನ ಕಿಡಿಗೇಡಿಗಳು ಬಸ್ಸನ್ನು ತಡೆದು ಕಲ್ಲುಗಳಿಂದ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ನಷ್ಟ ಉಂಟುಮಾಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈಗಾಗಲೇ ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.