
ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ.



ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ.
ಸೋಮವಾರ ರಾತ್ರಿ ಸುಮಾರು11.30 ಗಂಟೆಯ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹುಡುಕಾಡಿದಾಗ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಮೃತ ದೇಹವನ್ನು ಮೇಲಕ್ಕೆತ್ತಿದರು . ಶರ್ಮಿಳಾರ ಪತಿ ಶಿವ ಅಮೈ ರಸ್ತೆ ಬಳಿಯ ಅಕೌಂಟೆಂಟ್ ಕಚೇರಿ ನಡೆಸುತ್ತಿದ್ದು ಇದೇ ಕಚೇರಿಯಲ್ಲಿ ಶರ್ಮಿಳಾ ಕೂಡಾ ಅಕೌಂಟೆಂಟ್ ಆಗಿ ದುಡಿಯುತ್ತಿದ್ದರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.