Visitors have accessed this post 714 times.
ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು.
ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿವಾಹಿತೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ಹೇಳಲಾಗಿದೆ.