
ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ .ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ ಸಚಿನ್ ಕೆಯ್ಯೂರು ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರನ ವೇನೆಂದು ತನಿಖೆ ನಡೆಸುತ್ತಿದ್ದಾರೆ


