Visitors have accessed this post 362 times.

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ ಸಿದ್ಧರಾಮಯ್ಯ

Visitors have accessed this post 362 times.

 ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

 

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.

Leave a Reply

Your email address will not be published. Required fields are marked *