Visitors have accessed this post 375 times.
ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮನೆ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು.
ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದರು. ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರಾದ ಪಿ.ವಿ. ಮೋಹನ್, ಎಂ.ಜಿ. ಹೆಗ್ಡೆ, ಸುರೇಶ್ ಬಲ್ಲಾಳ್, ಪದ್ಮರಾಜ್, ಪ್ರವೀಣ್ ಚಂದ್ರ ಆಳ್ವ, ಶಾಹುಲ್ಬಹಮೀದ್, ಶಾಲೆಟ್ ಪಿಂಟೋ, ವಿಶ್ವಾಸ್ ಕುಮಾರ್ ದಾಸ್, ದೇವಿಪ್ರಸಾದ್ ಶೆಟ್ಟಿ ಸಹಿತ ಮತ್ತಿತರರು ಇದ್ದರು.