November 8, 2025
WhatsApp Image 2024-08-26 at 10.30.23 AM

ಹೈದ್ರಾಬಾದ್ : ನಾಂದೇಡ್ ನ ಹಿರಿಯ ಕಾಂಗ್ರೆಸ್ ಸಂಸದ ವಸಂತ್ ರಾವ್ ಚವ್ಹಾಣ ವಿಧಿವಶರಾಗಿದ್ದಾರೆ.ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.

ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಾವಿನೊಂದಿಗೆ ಅವರ ಹೋರಾಟ ವಿಫಲವಾಯಿತು. ಆರಂಭದಲ್ಲಿ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.

ಚವಾಣ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಹೈದರಾಬಾದ್‌ಗೆ ಕರೆದೊಯ್ಯಲಾಯಿತು.ಅವರು ಪ್ರತಿ ತಿಂಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು, ನಾಂದೇಡ್‌ನಲ್ಲಿ ನಡೆದ ಕಾಂಗ್ರೆಸ್‌ ವಿಭಾಗೀಯ ಸಭೆಯಿಂದಾಗಿ ನಿತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ.

About The Author

Leave a Reply