ವಿಟ್ಲ: ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ.
ರಮೇಶ್ ಶಿವಾಜಿನಗರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಆಟೋ ಚಾಲಕರಾಗಿದ್ದ ರಮೇಶ್ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವರು ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.