March 1, 2026
WhatsApp Image 2024-08-27 at 11.05.29 AM

ಬಂಟ್ವಾಳ: ಭಾರೀ ಮಳೆಗೆ ಗುಡ್ಡವೊಂದು ಕುಸಿದು ಮನೆ ಮೇಲೆ ಬಿದ್ದ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್‌ ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ನಿನ್ನೆ ರಾತ್ರಿ ಸುರಿದ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದಿದ್ದರು. ಆದರೆ ಅವರೆಲ್ಲರೂ ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About The Author

Leave a Reply