
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು.
ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಯಶಸ್ಸು ಕಂಡು ಕಾಂಗ್ರೆಸ್ ನಾಯಕರು ಗಾಬರಿಗೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳನ್ನು ಕೈಬಿಟ್ಟು ಕಾಲಹರಣ ಮಾಡುತ್ತಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಒಪ್ಪಿಕೊಂಡಂತೆ ಮುಡಾ ಹಗರಣವನ್ನೂ ಒಪ್ಪಿಕೊಂಡು ನ್ಯಾಯಾಲಯದ ಆದೇಶಕ್ಕೂ ಮುನ್ನ ಭಂಡತನ ಬಿಟ್ಟು ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದಾರೆ.