Visitors have accessed this post 116 times.

ಆ.31: ಅಲೋಶಿಯನ್ ಫೆಸ್ಟ್ 2024

Visitors have accessed this post 116 times.

ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ. ಸಭಾಂಗಣದಲ್ಲಿ
ಶನಿವಾರ, ಆಗಸ್ಟ್ 31 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ“ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಬಳಿಕ ಮಾತಾಡಿದ ಸಹಆಯೋಜಕಿ ಭವ್ಯಾ ಶೆಟ್ಟಿ ”ಕಾಲೇಜಿನ ಹಳೆ ವಿದ್ಯಾರ್ಥಿ ಕೆಂಡಸಂಪಿಗೆ ಖ್ಯಾತಿಯ ನಟಿ ಮಾನ್ವಿತಾ ಕಾಮತ್ ಅವರು ಈ ಉತ್ಸವದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಗೌರವ ಅತಿಥಿಯಾಗಿ ಲೇಖಕಿ ಸೆರಾ ಫೆಲೆಕ್ಸ್ ಆಗಮಿಸಲಿದ್ದು ಅವರು ಬರೆದಿರುವ ‘ಎ ಕ್ರೈ ಹರ್ಡ್ ಆಸ್ ಎ ಸಾಂಗ್’ ಎನ್ನುವ ಪುಸ್ತಕ
ಈ ವೇಳೆ ಬಿಡುಗಡೆಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಮಾಧಿಕಾರಿ ವಂ.ಮೆಲ್ವಿನ್ ಜೋಸೆಫ್‌ ಪಿಂಟೋ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು.
ಈ ಉತ್ಸವವು ‘ಹಬ್ಬಗಳ ಹಬ್ಬ’ ಹಾಗೂ ‘ಸಾಂಸ್ಕೃತಿಕ ಹಬ್ಬ’ ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುವುದು, ‘ಹಬ್ಬಗಳ ಹಬ್ಬ’ದಲ್ಲಿ ಒಟ್ಟು 31 ಶೈಕ್ಷಣಿಕ ಸ್ಪರ್ಧೆಗಳನ್ನು ಕಲಾ, ವಾಣಿಜ್ಯ, ವಿಜ್ಞಾನ, ಬಿಸಿಎ, ಬಿಬಿಎ, ಬಿವೋಕ್ ಹಾಗೂ ವಿಜ್ಞಾನ ಪ್ರದರ್ಶನಗಳು ಹಾಗೂ ಸಾಂಸ್ಕೃತಿಕ ಹಬ್ಬಗಳಲ್ಲಿ ಶಾಸ್ತ್ರೀಯ ನೃತ್ಯ ಫೇಸ್ ಪೈಂಟಿಂಗ್, ಮೆಹೆಂದಿ, ಕಸದಿಂದ ರಸ್ತೆ ಹಾಗೂ ವೈವಿದ್ಯಮ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ“ ಎಂದರು.
ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಅದ್ವಿಕಾ ಶೆಟ್ಟಿ ಮಾತನಾಡಿ ”ಸಮಾರೋಪ ಸಮಾರಂಭವು ಅಪರಾಹ್ನ ಗಂಟೆಗೆ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಉದ್ಯಮಿ
ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರವೀಣ್ ಮಾರ್ಟಿಸ್, ಎಸ್‌.ಜೆ, ಅವರು ವಹಿಸಲಿದ್ದಾರೆ. ವಿವಿಧ ಕಾಲೇಜುಗಳ 1000 ವಿದ್ಯಾರ್ಥಿಗಳನ್ನು ಒಳಗೊಂಡ ಸುಮಾರು 37 ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಕುಲಪತಿ ಡಾ.ರೇಜಿ ಜಾನ್, ವ್ಯಾನ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *