Visitors have accessed this post 311 times.
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಪ್ರತಿನಿಧಿಗಳ ಸಭೆ ಹಾಗೂ ಆಂತರಿಕ ಚುನಾವಣೆಯು ಆಗಸ್ಟ್ 29ರಂದು ಟ್ರಿನಿಟಿ ಹಾಲ್ ಪಡೀಲ್, ಪುತ್ತೂರಿನಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಗ್ಗೆ 10ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಪ್ರತಿನಿಧಿಗಳ ಸಭೆಗೆ ಚಾಲನೆ ನೀಡಲಿದ್ದಾರೆ.
ಕಳೆದ ಮೂರು ವರ್ಷಗಳ ಅವಲೋಕನ ಸಭೆ, ಮುಂದಿನ ಮೂರು ವರ್ಷಗಳ ಪಕ್ಷದ ಗುರಿ ಮತ್ತು ಬೆಳವಣಿಗೆಗಳ ಸಮಗ್ರ ಚರ್ಚೆ ಪ್ರತಿನಿಧಿಗಳ ಸಭೆಯಲ್ಲಿ ನಡೆಯಲಿದೆ.
ಸಭೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ ಸಹಿತ ಹಲವರು ಭಾಗವಹಿಸಲಿದ್ದಾರೆ.