November 8, 2025
WhatsApp Image 2024-08-30 at 2.16.01 PM

ಪುತ್ತೂರು : ಇಲ್ಲಿನ ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ದೂರು ಸಾರ್ವಜನಿಕ‌ರಿಂದ ಬಂದಿತ್ತು. ಆದ್ದರಿಂದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಈ ವೇಳೆ ಮೈಸೂರು ಮೂಲದ ಯುವತಿ ಮತ್ತು ಮಹಿಳೆಯೊಬ್ಬರು ಮಾತ್ರ ಮನೆಯಲ್ಲಿದ್ದರು.

ಅವರನ್ನು ಪೊಲೀಸರು ಆಟೋ ರಿಕ್ಷಾವೊಂದರಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ. ಮೈಸೂರು ಮೂಲದ ಯುವತಿ ತನ್ನ ಸ್ನೇಹಿತೆ ಮನೆಗೆ ಬಂದಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಮಹಿಳೆಯರಲ್ಲಿ ಒಬ್ಬರು ಮುಸ್ಲಿಂ, ಮತ್ತೊಬ್ಬರು ಕ್ರಿಶ್ಚಿಯನ್ ಎಂದು ತಿಳಿದು ಬಂದಿದೆ. ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಮನೆಯಲ್ಲಿ ಪೊಲೀಸರು ಬರುವ ಮಾಹಿತಿ ಅರಿತು ಮನೆಯಲ್ಲಿದ್ದ ಯುವಕರು ಕಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸದ್ಯ ಪುತ್ತೂರಿನ ಮಹಿಳಾ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

About The Author

Leave a Reply