ಪುತ್ತೂರು: ಅರುಣ್ ಪುತ್ತಿಲ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!ಎಫ್​ಐಆರ್​ ದಾಖಲು

ಪುತ್ತೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ  ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply