Visitors have accessed this post 886 times.
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 9ಕ್ಕೆ ವಿಸ್ತರಣೆ ಮಾಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಕಾನೂನು ಸಮರ ನಡೆಸಿದ್ದಾರೆ. ಹೈಕೋರ್ಟ್‌ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿತ್ತು.
ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ನಡೆದಿತ್ತು. ಸುದೀರ್ಘ ವಿಚಾರಣೆ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದಾರೆ.