Visitors have accessed this post 579 times.

ಹಿಜಾಬ್ ಕಾರಣಕ್ಕೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ತಡೆ..?

Visitors have accessed this post 579 times.

ಕುಂದಾಪುರ : ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು.ಆದರೆ ಎರಡು ವರ್ಷಗಳ ಹಿಂದೆ ನಡೆದಿದ್ದ “ಹಿಜಾಬ್ ವಿವಾದ” ದಿಂದಾಗಿ ಇವರ ಆಯ್ಕೆಗೆ ಸರಕಾರ ತಡೆ ನೀಡಿದೆ. ಎರಡು ವರ್ಷಗಳ ಹಿಂದೆ ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನಲ್ಲಿ ತಡೆದು ನಿಲ್ಲಿಸಿದ್ದ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರನ್ನು 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯಮಟ್ಟದ ‘ಉತ್ತಮ ಪ್ರಾಂಶುಪಾಲ ಪ್ರಶಸ್ತಿ’ಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಆಯ್ಕೆ ಮಾಡಿತ್ತು.ಎಡಪಂಥೀಯರಿಂದ ಈ ಬಗ್ಗೆ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು.ಸೋಶಿಯಲ್ ಮೀಡಿಯಾದಲ್ಲೂ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿತ್ತು. ವಿವಾದ ಆಗುತ್ತಿದ್ದಂತೆಯೇ ಸರ್ಕಾರವು ಈ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ. ಅಲ್ಲದೇ, ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಪ್ರಶಸ್ತಿ ನೀಡುವುದಕ್ಕೆ ತಡೆ ನೀಡಿದ್ದಾರೆ ಎಂದು ಗೊತ್ತಾಗಿದೆ.

Leave a Reply

Your email address will not be published. Required fields are marked *