
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.



ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ ಎಂದು ಇಲಾಖೆ ತಿಳಿಸಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್, ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು.