October 20, 2025
WhatsApp Image 2024-09-06 at 10.23.23 AM

ದೇಶದಲ್ಲಿ ಕಾಮುಕಟ್ಟ ಅಟ್ಟಹಾಸ ಮುಂದುವರೆದಿದ್ದು, ಹಾಡಹಗಲೇ ರಸ್ತೆ ಬದಿ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಉಜ್ಜಿನಿಯ ರಸ್ತೆಬದಿಯ ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಾಣಬಹುದು. ಘಟನೆಯ ವಿಡಿಯೋ ಹೊರಬಿದ್ದ ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ನಂತರ ಪೊಲೀಸರು ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಮದುವೆಯಾಗುವುದಾಗಿ ಹೇಳಿ ಯುವತಿಗೆ ಬಲವಂತವಾಗಿ ಮದ್ಯ ಕುಡಿಸಿ, ಅತ್ಯಾಚಾರ, ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಪೊಲೀಸರ ಗಮನಕ್ಕೆ ಬಂದ ನಂತರ ಸಂತ್ರಸ್ತ ಮಹಿಳೆಯನ್ನು ಠಾಣೆಗೆ ಕರೆತರಲಾಯಿತು. ದೂರಿನ ಮೇರೆಗೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮದುವೆ ಆಮಿಷ ಒಡ್ಡಿ ಅತ್ಯಾಚಾರ ಎಸಗಿ ಬೆದರಿಸಿ ಓಡಿ ಹೋಗಿದ್ದ. ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಕುರಿತು ಮಾತನಾಡಿದ ಕೊತ್ವಾಲಿ ಸಿಎಸ್‌ಪಿ ಓಂಪ್ರಕಾಶ್ ಮಿಶ್ರಾ, ಉಜ್ಜಯಿನಿಯ ಕೊಯಿಲಾ ಫಾಟಕ್ ಮದ್ಯದಂಗಡಿ ಬಳಿ ಅತ್ಯಾಚಾರ ಘಟನೆಯ ವಿಡಿಯೋ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ವಿಡಿಯೋವನ್ನು ಗುರುತಿಸಿ ಮಹಿಳೆಯನ್ನು ಠಾಣೆಗೆ ಕರೆತಂದಿದ್ದಾರೆ. ಮಹಿಳೆಯ ದೂರಿನ ಮೇರೆಗೆ ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿ ಮಹಿಳೆಗೆ ಮದ್ಯ ನೀಡಿ ಮದುವೆಯಾಗುವಂತೆ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅತ್ಯಾಚಾರದ ಬಳಿಕ ಯುವಕ ಬೆದರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದು ತುಂಬಾ ಗಂಭೀರವಾದ ಘಟನೆ. ಸಂತ್ರಸ್ತೆಯ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

About The Author

Leave a Reply