Visitors have accessed this post 706 times.

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Visitors have accessed this post 706 times.

ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು’ ಎಂದಿದ್ದಾರೆ.

‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ-ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.

Leave a Reply

Your email address will not be published. Required fields are marked *